Sunday, October 11, 2009

ವರಾಹನಾಥ ಕಲ್ಲಹಳ್ಳಿ ಬನ್ನಿ ಒಮ್ಮೆ ನೋಡಿ !


ವರಾಹ ನಾಥ ಕಲ್ಲಹಳ್ಳಿ  ಮಂಡ್ಯ ಜಿಲ್ಲೆಯ ಕೆ .ಅರ. ಪೇಟೆ ತಾಲೂಕಿನ ಒಂದು ಪುಣ್ಯ ಕ್ಷೇತ್ರ !ಕೆ.ಅರ. ಪೇಟೆ ಯಿಂದ ೧೮.ಕಿ.ಮಿ.,ಮೈಸೂರಿನಿಂದ ೪೩ ಕಿ.ಮಿ. ದೂರದಲ್ಲಿದೆ.ಪಶ್ಚಿಮ ದಿಂದ ಉತ್ತರಕ್ಕೆ ಸಾಗುವ ಹೇಮಾವತಿ ನದಿಯ ದಡದಲ್ಲಿ ದೇವಾಲಯ ನಿರ್ಮಾಣವಾಗಿದೆ!ದೇವಾಲಯ ಪೂರ್ವಕ್ಕೆ ಮುಖ ಮಾಡಿದ್ದು ,ಗರ್ಭ ಗಡಿಯಲ್ಲಿ ಎತ್ತರದ ಪೀಠದ ಮೇಲೆ ವರಾಹ ಸ್ವಾಮಿ ಹಾಗು ಎಡ ತೊಡೆಯ ಮೇಲೆ ಭೂದೇವಿಯು ಆಸಿನಳಾಗಿದ್ದು, ಅವಳ ಸೊಂಟವನ್ನು ವರಾಹಸ್ವಾಮಿಯು ಬಳಸಿ ವಿಶಿಷ್ಟ ಬಂಗಿಯಲ್ಲಿ ದರ್ಶನ ನೀಡುತ್ತಾನೆ!ಮೂರ್ತಿಯು  ಭವ್ಯ ವಾಗಿದ್ದು ೧೫ ಅಡಿ ಎತ್ತರವಿದೆ!ಹೊರಗಿನಿಂದ ದೇವಾಲಯ ನೋಡಿದವರಿಗೆ ಇಷ್ಟು ದೊಡ್ಡ ದೇವರ ಮೂರ್ತಿ ಒಳಗಡೆ ಇದೆ ಎಂದರೆ ನಂಬಲಾರರು!ಇದನ್ನು ಭೂವರಾಹನಾಥ  ಸನ್ನಿದಿ ಎಂದು ನಂಬಿರುವ  ಜನರು ಭೂಮಿಗೆ ಸಂಬಂದಿಸಿದ ಕಷ್ಟಗಳು ಪರಿಹಾರ ವಾಗುತ್ತವೆ ಎಂದು ಹೇಳುತ್ತಾರೆ!ಬೆವಾಲಯದ ಮುಂಬಾಗದಲ್ಲಿ ಒಂದು ಶಿಲಾಶಾಸನದ ಕಲ್ಲಿದ್ದು ದೇವಾಲಯದ ಮಾಹಿತಿ ನೀಡುತ್ತಿದೆ .೧೩೩೪ರ ಈ ಶಾಸನದ ರೀತ್ಯಾ ಮಹಾಪ್ರಧಾನ ಆದಿ ಸಿಂಗೇಯ ನಾಯಕನು ಕಲ್ಲಹಳ್ಳಿ ಗ್ರಾಮವನ್ನು ಅಗ್ರಹಾರವಾಗಿಸಿ ,ರಾಣಿ ದೇಮಲದೇವಿಯ ಹೆಸರಿನಲ್ಲಿ ದೇವಲಾಪುರ ಎಂದು ನಾಮಕರಣ ಮಾಡಿ ,ರಾಜ ಗುರು ಗುಮ್ಮಟ ದೇವನಿಗೆ ದಾನ ಮಾಡಿರುವುದಾಗಿ ತಿಳಿಸುತ್ತದೆ.ಶಾಸನದಲ್ಲಿ ಸೂರ್ಯ-ಚಂದ್ರ ,ಕಮಂಡಲ ,ದೀಪ ಮಾಲೆ ಕಂಬ ಅರ್ದ ಮಾನವ ಹಾಗು ಅರ್ದ ಬೇರುಂಡ ಪಕ್ಷಿ ಕೆತ್ತನೆಯಿದ್ದು ,ಪಂಜ ಮೇಲೆತ್ತಿ  ಗರ್ಜಿಸಿರುವ ಹುಲಿಯ ಕೆತ್ತನೆ ಅದ್ಭುತವಾಗಿದೆ.ಬಂದವರು ಊಟ ತಿಂಡಿ ಯನ್ನು ಜೊತೆಯಲ್ಲಿ ತರುವುದು ಒಳ್ಳೆಯದು ! ಇಲ್ಲಿ ತಿನ್ನಲು ಯಾವ ಸೌಲಬ್ಯ ಇರುವುದಿಲ್ಲ .ಮೈಸೂರಿನಿಂದ ಒಂದು ಸರ್ಕಾರಿ ಬಸ್ಸು ಬೆಳಿಗ್ಗೆ ೭ ಗಂಟೆಗೆ ಹೊರಡುತ್ತದೆ .ಸ್ವಂತ ವಾಹನ ಇದ್ದಲ್ಲಿ ಇನ್ನು ಸುತ್ತ ಮುತ್ತ  ಕೆಲವು ಪ್ರದೇಶ ನೋಡಬಹುದು!ಒಮ್ಮೆ ಪ್ರಯತ್ನಿಸಿ ಸಂತೋಷ ಹೊಂದಿರಿ.

1 comment:

Deep said...

Varaha murthi devasthana .. channagide.. kele iralilla.

Photo's next blog nalli update madteera?