Sunday, May 17, 2015

ಹೀಗೊಂದು ತುಂಟ ಮನಸಿನ ಜೊತೆ ಪಯಣ ......16 ಹಾವೇರಿಯಲ್ಲಿ ಹಸಿವಿನಲ್ಲೂ ಹುಡುಗಾಟ ,

ಜ್ಞಾನದಲ್ಲಿ  ದೇವರ ಕಂಡ ಕನಕ ದಾಸರು 





ಬಾಡ ದಲ್ಲಿನ  ವೃತ್ತದಲ್ಲಿ  ಕುಳಿತಿದ್ದ  ಕನಕದಾಸರ  ಪ್ರತಿಮೆ   "ನೀ ಮಾಯೆಯೊಳಗೋ  ಮಾಯೇಯೋಳು ನೀನೋ " ಎಂದು ಹಾಡುವ ಬದಲಾಗಿ   "ನೀ ಅಜ್ಞಾನ ದೊಳಗೋ   ಅಜ್ಞಾನ ದೊಳು  ನೀನೋ"   ಎಂದು ಹಾಡಿದಂತೆ  ಅನ್ನಿಸಿ  ಹೆಚ್ಚಿನ ಸಮಯ ವ್ಯರ್ಥ ಮಾಡಬಾರದೆಂದು   ಕಾಗಿನೆಲೆ ನೋಡಲು  ಹಾವೇರಿಯ ಕಡೆ  ಪಯಣ  ಮುಂದುವರೆಸಿದೆವು , ಹೊಟ್ಟೆ ಚುರುಗುಟ್ಟುತ್ತಿತ್ತು , ಕಾರು ಹಾವೇರಿ  ಪ್ರವೇಶ  ಮಾಡಿತ್ತು ,


ಹಾವೇರಿಯಲ್ಲಿ  ಒಂದು  ಒಳ್ಳೆಯ ಹೋಟೆಲ್


 ಹಾವೇರಿ  ಪಟ್ಟಣದೊಳಗೆ ನಮಗೆ ಮೊದಲ ಪ್ರವೇಶ ,  ಆ ಊರಿನ ಬಗ್ಗೆ ಹೆಚ್ಚು ತಿಳುವಳಿಕೆ ಇರಲಿಲ್ಲ, 
ಯಾವುದಾದರೂ ಒಳ್ಳೆ ಹೋಟೆಲ್ ಸಿಕ್ಕಿದರೆ  ಮೊದಲು ಊಟ ಮಾಡೋಣಾ  ಅಂತಾ  ಅನ್ನಿಸಿತು. ಹಾವೇರಿಗೆ  ಪ್ರವೇಶಿಸುತ್ತಿದ್ದಂತೆ  ಕಂಡಿತು ಒಂದು ಭವ್ಯ  ಕಟ್ಟಡದಲ್ಲಿ ಮಿಂಚುತ್ತಿದ್ದ   ಹೋಟೆಲ್ ಒಂದಕ್ಕೆ ನಮ್ಮ ಪ್ರವೇಶ , ಅಚ್ಚರಿ ಎಂದರೆ  ಒಬ್ಬರೂ ಗ್ರಾಹಕರು ಇರಲಿಲ್ಲ,  ಪ್ರಕಾಶಣ್ಣ  ಹೇಳಿದ್ರೂ ಕೇಳದೆ  ಬನ್ನಿ ಪ್ರಕಾಶಣ್ಣ  ಜನ ಜಾಸ್ತಿ ಇಲ್ಲಾ  ಆರಾಮವಾಗಿ  ಕುಳಿತು ಹೊಟ್ಟೆ ತುಂಬಾ ಊಟ ಮಾಡೋಣ ಅಂತಾ    ಆ ಹೋಟೆಲ್ ನೊಳಗೆ  ಪ್ರವೇಶಿಸಿ   ಮೂರು ಊಟಕ್ಕೆ  ಆರ್ಡರ್  ಮಾಡಿ  ಕೈತೊಳೆಯಲು  ಹೊರಟೆ  ಪ್ರಕಾಶಣ್ಣ  ಮೊದಲು ಹೋಗಿದ್ದವರು  ಓದಿ ಬಂದು  ಬಾಲಣ್ಣ  ಇಲ್ಲಿ ತಿಂದೆ ಇದ್ರೂ  ಪರವಾಗಿಲ್ಲ ಮೊದಲು ಆರ್ಡರ್ ಕ್ಯಾನ್ಸಲ್ ಮಾಡಿ ಅಂತಾ ಒಂದೇ ಉಸಿರಿಗೆ ಹೇಳಿದ್ರೂ  , ಅರೆ ಇದೇನಿದೂ ಅಂತಾ  ಕೈತೊಳೆಯಲು ಹೋದ್ರೆ  ಆ ವಾಶ್ ಬೇಸಿನ್ ನೋಡಿ   ಅಲ್ಲಿನ ದರ್ಶನ ಕಂಡು ಸುಸ್ತಾದೆ , ಅತ್ಯಂತ ಕೊಳಕು ವಾಶ್ ಬೇಸಿನ್,  ಊಟಮಾಡಲು ಅಸಹ್ಯ ಉಂಟುಮಾಡುವಂತಹ  ದರ್ಶನ  ನೀಡಿತ್ತು, ಈ ಹೋಟೆಲ್  ಹೊರನೋಟಕ್ಕೆ  ಥಳಕು  ಒಳಗಡೆ  ಗಬ್ಬು ನಾರುವ ಕೊಳಕು  ಎಂಬುದು ಅರ್ಥ ಆಗಿತ್ತು,  ಈ  ಗಡಿಬಿಡಿಯಲ್ಲಿ  ಆ ಹೋಟೆಲ್ ಹೆಸರನ್ನು ನೋಡೋದೇ ಮರೆತಿದ್ದೆ . ಮೊದಲೇ ಹೊಟ್ಟೆ ಹಸಿವು  ತಿನ್ನಲು ಹೋದ್ರೆ ಇಂತಹ ಹೋಟೆಲ್ ಗಳ ನರಕ ದರ್ಶನ , ನಮ್ಮ ಪ್ರವಾಸಕ್ಕೆ ಹೊಸ ಅನುಭವ ಸೇರಿಸಿತ್ತು,  ಹಸಿವಿನ ಆತುರದಲ್ಲಿ   ಮಾಡಿಕೊಂಡಿದ್ದ  ನಮ್ಮ ದಡ್ಡತನಕ್ಕೆ  ಪ್ರಕಾಶಣ್ಣ  ಹಾಗು ನಾನು ಪರಸ್ಪರ  ಮುಖ ನೋಡಿಕೊಂಡು  ನಕ್ಕು  ಮುಂದೆ ಸಾಗಿದೆವು  , ಸ್ಥಳಿಯರ  ಶಿಫಾರಸ್ಸಿನಂತೆ   ಹಾವೇರಿ ಪಟ್ಟಣದೊಳಗೆ   ಇದ್ದ  ಹೋಟೆಲ್ ಶಿವ ಶಕ್ತಿ   ಯನ್ನು ಹೊಕ್ಕೆವು .     ಇದ್ದದ್ದರಲ್ಲಿ ನಮ್ಮ   ಹಸಿವಿನ  ಸಂಕಟಕ್ಕೆ  ಇದ್ದದ್ದರಲ್ಲೇ  ಶುಚಿಯಾದ ರುಚಿಯಾದ  ಊಟ  ಸಾಂತ್ವನ  ಸಾಂತ್ವನ ನೀಡಿತ್ತು .

 
 ಪ್ರಕಾಶಣ್ಣ ಹಾಸ್ಯಕ್ಕೆ  ನೆತ್ತಿ ಹತ್ತಿತ್ತು  ನನಗೆ 


ಹೋಟೆಲ್ ಶಿವಶಕ್ತಿಯಲ್ಲಿ  ಊಟ ಮಾಡುತ್ತಾ , ಸಮಾಧಾನ ಪಟ್ಟು ಕೊಂಡೆವು ,   ಇನ್ನೇನು  ಊಟ ಮುಗಿಸಿ  ನೀರು ಕುಡಿಯುವ ವೇಳೆ  , ಪ್ರಕಾಶ್ ಹೆಗ್ಡೆ  ಹಾಸ್ಯದ  ಬಾಣ  ಬಿಟ್ಟರು ,   ಬಾಲಣ್ಣ  ಒಂದು ವೇಳೆ ಅದೇ ಕೊಳಕಿನ  ವಾಶ್ ಬೇಸಿನ್ ನಲ್ಲಿ  ಕೈತೊಳೆದು ಅದೇ ಹೋಟೆಲ್ ಊಟ ಮಾಡಿದ್ರೆ ನಮ್ಮ ಮುಖ  ಹೇಗೆ ಇರ್ತಿತ್ತು  ..?  ನೀರು ಕುಡಿಯುತ್ತಿದ್ದ ನನಗೆ ಈ ಹಾಸ್ಯಕ್ಕೆ  ನಗು ತಡೆಯಲಾಗಲಿಲ್ಲ,    ಗೊಳ್  ಅಂತಾ ನಕ್ಕೆ  ಕುಡಿಯುತ್ತಿದ್ದ  ನೀರು ಚಿಲುಮೆ ಯಂತೆ ಉಕ್ಕಿ  ಮೈಮೇಲೆ  ಚೆಲ್ಲಿತು ,   ಅದೇ ಸಮಯಕ್ಕೆ ನನ್ನ ಶಿಷ್ಯ  ನನಗೆ ಗೊತ್ತಿಲ್ಲದಂತೆ ಚಿತ್ರ ತೆಗೆದು   ಆ ಸನ್ನಿವೇಶ ದ  ದರ್ಶನ   ಮಾಡಿಸಿದ . ಅ ಕೊಳಕು ಹೋಟೆಲ್  ನಲ್ಲಿನ   ನಮ್ಮ ಎಡವಟ್ಟು  ಪ್ರಸಂಗ ನೆನೆ ನೆನೆದು ಮಸಾರೆ ನಕ್ಕು ಬಿಟ್ಟೆವು .  ರುಚಿಯಾದ  ಊಟದ ಜೊತೆ  ಈ ಹಾಸ್ಯದ ರಸಾಯನ   ನಮ್ಮ ಪ್ರಯಾಣದ  ಆಯಾಸ  ಪರಿಹಾರ ಮಾಡಿತ್ತು .



 ಹಾವೇರಿಯ ವಿಶೇಷದಲ್ಲಿ   ಈ ಪಾನ್ ಅಂಗಡಿ  ಸಹ ಒಂದು 

 ಹೊಟ್ಟೆ ತುಂಬಾ ಊಟ ಮಾಡಿ ಹೊರಗೆ ಬಂದ  ನಮಗೆ  ಪಕ್ಕದಲ್ಲೇ ಕಂಡಿದ್ದು ಈ ಬೀಡಾ  ಶಾಪ್ , ಎಲ್ಲರೊಡನೆ  ನಗು ನಗುತ್ತಾ ಪಾದರಸದಂತೆ ಬೀಡಾ  ಕಟ್ಟಿಕೊಡುತ್ತಿದ್ದ  ಈ ಹುಡುಗನನ್ನು  ರೇಗಿಸುತ್ತಾ  ಸಿಹಿಯಾದ ಬೀಡಾ  ತಿಂದು  ಖುಶಿ ಪಟ್ಟೆವು .   ಅರೆ ರುಚಿಯಾದ  ಊಟ ಕೊಟ್ಟು  ನಮಗೆ ಖುಶಿನೀಡಿದ  ಹಾವೇರಿ ಬಗ್ಗೆ ಪರಿಚಯ ಮಾಡಿಕೊಳ್ಳೋಣ ಬನ್ನಿ ,






ಈ ಹಾವೇರಿ ಯಲ್ಲಿ ನೋಡೋದು ಬಹಳಷ್ಟಿದೆ , ಆದ್ರೆ ನಮಗೆ ಸಮಯ ಬಹಳ ಕಡಿಮೆ ಇದ್ದ ಕಾರಣ , ಕಾಗಿನೆಲೆ  ಮಾತ್ರ ನೋಡಲು ಸಾಧ್ಯ ಆಯ್ತು,  ಆದರೆ  ಮುಂದೆ ಬಂದಾಗ ಇನ್ನಷ್ಟು ನೋಡಲು  ಒಂದಷ್ಟು ಮಾಹಿತಿ ಸಂಗ್ರಹ   ಮಾಡಿಕೊಂಡೆ . ಹಾವೇರಿಯಲ್ಲಿ   ಐತಿಹಾಸಿಕ  ಸಿದ್ದೇಶ್ವರ  ದೇವಾಲಯ ವಿದೆ,  ಇನ್ನು ಈ ಜಿಲ್ಲೆ   ಹಲವಾರು  ಮಹಾಪುರುಷರಿಗೆ  ಜನ್ಮ ನೀಡಿದೆ , ಸರ್ವಜ್ಞ , ಕನಕದಾಸ, ಶಿಶುನಾಳ ಶರೀಫರು ,  ಹಾನಗಲ್ ಕುಮಾರ ಶಿವಯೋಗಿಗಳು,  ವಾಗೀಶ ಪಂಡಿತರು, ಗಾನಯೋಗಿ ಪಂಚಾಕ್ಷರಿ ಗವಾಯಿಗಳು,  ಲೇಖಕರಾದ  ಗಳಗನಾಥರು ,  ಗೋಕಾಕ್ ಚಳುವಳಿ ನೇತಾರ, ಡಾಕ್ಟರ್ . ವಿ. ಕೆ. ಗೋಕಾಕ್ ರವರು,  ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ,   ಸ್ವಾತಂತ್ರ್ಯ ಕ್ಕಾಗಿ ಬ್ರಿಟೀಷರ ಸೆಣಸಿದ  ಮೈಲಾರ ಮಹಾದೇವ  ಈ ಮಣ್ಣಿನ ಮಗನೆ .  ಈ ಜಿಲ್ಲೆಯ ನೆಲ  ಚಾಲುಕ್ಯ , ರಾಷ್ಟ್ರಕೂಟ , ಕದಂಬ , ಹೊಯ್ಸಳ, ವಿಜಯನಗರ ಸಾಮ್ರಾಜ್ಯದ ಅರಸರ  ಆಳ್ವಿಕೆ   ಕಂಡಿದೆ .  ತುಂಗಭದ್ರ , ಹಾಗು  ವರದ ಈ ಜಿಲ್ಲೆಯ ಪ್ರಮುಖ ನದಿಗಳು , ತುಂಗಾ ಭದ್ರ ನದಿಯನ್ನು ವರದಾ ನದಿ  ಸೇರುವ   ತಾಣ ಇಲ್ಲಿದೆ .   ನಮ್ಮ ದೇಶದಲ್ಲಿ ಮೆಣಸಿನಕಾಯಿ  ಅಂದ್ರೆ ತಕ್ಷಣ ಜ್ಞಾಪಕಕ್ಕೆ ಬರೋದು   ಒಂದು  ಅಂದ್ರದ ಗುಂಟೂರು, ಮತ್ತೊಂದು  ನಮ್ಮ ರಾಜ್ಯದ ಬ್ಯಾಡಗಿ ,   ಈ ಪ್ರಸಿದ್ಧ  ಬ್ಯಾಡಗಿ ಹಾವೇರಿ ಜಿಲ್ಲೆಯ ತಾಲೂಕು ಕೇಂದ್ರ , ಇಷ್ಟೊಂದು ವಿಶೇಷ ಹೊಂದಿರುವ   ಹಾವೇರಿ ಜಿಲ್ಲಾ ದರ್ಶನ  ಮಾಡಲು ಮತ್ತೊಮ್ಮೆ ಬರುವ ಸಂಕಲ್ಪ ಮಾಡಿ   ಕನಕದಾಸರು ಪೂಜಿಸಿದ  ಆದಿಕೇಶವನ ನೋಡಲು ದೌಡಾಯಿಸಿದೆವು .

8 comments:

Badarinath Palavalli said...

ಹಾವೇರಿ ಜಿಲ್ಲೆಯಲ್ಲಿ ಜನಿಸಿದ ಮಹಾಪುರುಷರ ಪಟ್ಟಿ ನೋಡಿ ಖುಷಿಯಾಯಿತು.

ಮೊದಲು ಹೋಗಿದ್ದ ಹೋಟೆಲಿನ ಕೈ ತೊಳೆಯುವ ಜಾಗದ ಚಿತ್ರ ಹಾಕದೇ ಇದ್ದಕ್ಕಾಗಿ ಧನ್ಯವಾದಗಳು.

ನೆನಪಿನ ಅಲೆಗಳ ಜೊತೆ ನನ್ನ ಪಯಣ said...

ಬಾಲು ಸರ್, ನಾನು ಹಾವೇರಿ ಜಿಲ್ಲೆಯವನು, ಹಾವೇರಿ ಯಾಲಕ್ಕಿ ಮಾರುಕಟ್ಟೆಗೆ ಪ್ರಸಿದ್ದಿ ಹೊಂದಿದೆ, ಮುಂದಿನ ಸಾರಿ ಭೇಟಿ ಕೊಟ್ಟಾಗ ನಿಮಗೆ ಒಂದು ಒಳ್ಳೆಯ ಪುರಾತನ ದೇವಸ್ಥಾನದ ಪರಿಚಯ ಮಾಡಿಸುತ್ತೇನೆ, 'ಗಳಗನಾಥ' ಎಂಬ ಊರಿದೆ , ಆ ಊರಿನ ವಿಶೇಷ ಎಂದರೆ ಅಲ್ಲಿ ಒಟ್ಟು ಮೂರು ನದಿಗಳ ಸಂಗಮವಾಗಿದೆ.. ನದಿಗಳ ಸಂಗಮ ಸ್ಥಳದಲ್ಲೇ 'ಗಳಗನಾಥೆಶ್ವರ' ಎಂಬ ಪುರಾತನ ಕಾಲದ ದೇವಸ್ಥಾನವಿದೆ, ನೋಡಲು ತುಂಬಾ ಸುಂದರವಾದ ಸ್ಥಳ.. ಮುಂದಿನ ಸಾರಿ ಖಂಡಿತ ಬೇಟಿ ಕೊಡಿ,
ಹಾವೇರಿಯಿಂದ ೩೫ ಕಿ.ಮಿ ದೂರವಾಗಬಹುದು ಅಷ್ಟೇ...

ನಮ್ಮ ಜಿಲ್ಲೆಯ ಪರಿಚಯ ಮಾಡಿ ಕೊಟ್ಟಿದ್ದಕ್ಕೆ ಧನ್ಯವಾದಗಳು,

Unknown said...

ರಿ ಬಾಲು ನಿಮ್ಮ ಲೇಖನ ಬಹಳ;ಬಹಳ ಇಷ್ಟ ಆಯ್ತು.ಅಂದ ಹಾಗೆ ಅಲ್ಲಿ ಮಿರ್ಚಿ ತಿಂದ್ರ. ಮನಿಕೊಳಕ್ಕೆ ಯೆನ್ ಮಾಡ್ಕಂಡ್ರಿ

Harini Narayan said...

ಚಿಲುಮೆಯಂತೆ ಉಕ್ಕಿದ ಫೋಟೋ ಎಲ್ಲಿ ? ಕಾಣಿಸಲಿಲ್ಲ. ಹಾವೇರಿ ಮಹಾನ್ ಗಳ ಪರಿಚಯ ಚೆನ್ನಾಗಿದೆ.

Srikanth Manjunath said...

ಸಾಮಾನ್ಯ ಪ್ರವಾಸ ಅಂತ ಹೊರಟಾಗ ಎರಡು ವಿಷಯಗಳಿಗೆ ಮನಸ್ಸು ಚಡಪಡಿಸುತ್ತದೆ.. ಹೊಟ್ಟೆಗೆ ಊಟ ಮತ್ತು ದೇಹಕ್ಕೆ ವಿಶ್ರಾಂತಿ... ಹತ್ತರಲ್ಲಿ ಎರಡು ಬಾರಿ ಮಾತ್ರ ಈ ಎರಡು ವಿಷಯಗಳಿಗೆ ಸಮಾಧಾನ ಸಿಗುತ್ತದೆ.
ಪ್ರವಾಸಿ ತಾಣಗಳಲ್ಲಿ ಅಲ್ಲಿನ ಹೋಟೆಲ್ ನವರಿಗೆ ಒಂದು ಖಾತ್ರಿ ವಿಷಯ ಏನಂದರೆ ಬರುವವರು ಮತ್ತೆ ಮತ್ತೆ ಬರೋಲ್ಲ ಅನ್ನುವ ನಂಬಿಕೆ. ಆ ದೃಷ್ಟಿಯಿಂದ ಬರಿ ಲಾಭ ಮಾಡಲಷ್ಟೇ ಆ ಹೋಟೆಲ್ ಗಳು ಸಿದ್ಧವಿರುತ್ತದೆ ಶುಚಿ ರುಚಿಗಳಿಗೆ ಅಲ್ಲ..
ಇವೆಲ್ಲವೂ ಒಂದು ಅನುಭವ... ಮನುಜನ ಮನಸ್ಥಿತಿ ಬದಲಾಗದೆ ಬದಲಾಗದು.

ಹಾವೇರಿಯ ಬಗ್ಗೆ ಸಂಕ್ಷಿಪ್ತ ವಿವರ ಸೊಗಸಾಗಿದೆ.. ಒಟ್ಟಿನಲ್ಲಿ ಸಿಗುವ ಸಮಯದಲ್ಲಿಯೆ ಆ ತಾಣಗಳ ಇತಿಹಾಸ ಕೆದಕಿ, ಸಮಗ್ರವಾಗಿ ಅಧ್ಯಯನ ಮಾಡಿ ಬರೆಯುವ ನಿಮ್ಮ ಲೇಖನಗಳು ನಿಜಕ್ಕೂ ಒಂದು ಉಪಯುಕ್ತ ಸಂಗ್ರಹ ಯೋಗ್ಯ ಕೈಪಿಡಿ.

ಸೂಪರ್ ಸರ್

bilimugilu said...

Balu Sir, elli aa epic photo :) :) ha ha... endinanthe sthala parichaya bahala ishtavaagutte :) thanks for sharing........

Subru said...

ಸಂಗಮೇಶ್ವರವೋ ಅಲ್ಲ ಸಂಗಾಪುರವೊ ಎರಡೂ ಚಂದ
ನಿಮ್ಮೊಳಗೊಬ್ಬ ಬಾಲುವಿನ ಸುಂದರ ಲೇಖನದಿಂದ!
ತೀರ್ಥ ಹಳ್ಳಿಯ ಕವಳೆ ದುರ್ಗ ಹಾವೇರಿಯ ಕಾಗಿನೆಲೆ
ತುಂಗಾ ಮಡಿಲು ಕೂಡ ಬಾಲುವಿನ ಚಿತ್ರಮಯ ಕಲೆ!

Unknown said...

ಮಾನ್ಯರೇ, ಸಂತೋಷಕ್ಕಾಗಿ ಹೋಗುವ ಪ್ರವಾಸದಲ್ಲಿ ಮುಜುಗರಕ್ಕೆ ಒಳಗಾಗುವ ಸನ್ನಿವೇಶಗಳನ್ನು ಮನಮುಟ್ಟುವಂತೆ ತಿಳಿಸಿದ್ದೀರಿ. ಒಂದು ರೀತಿಯಲ್ಲಿ ಮಾನಸಿಕವಾಗಿ ನಾವೂ ಪ್ರವಾಸ ಹೊಗಿಬಂದಂತಾಯಿತು. ಧನ್ಯವಾದಗಳು.